alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಖ್ಯೆ ಹೇಳದ ಬಾಲಕನ ಕಣ್ಣಿಗೆ ಪೆನ್ನು ಚುಚ್ಚಿದ ಶಿಕ್ಷಕ

ಶಿಕ್ಷಕನೊಬ್ಬ ಶಾಲೆ ವಿದ್ಯಾರ್ಥಿಗೆ ಕ್ರೂರವಾಗಿ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಷಹಜಾನ್ಪುರದ ರೋಜಾ ಪ್ರದೇಶದಲ್ಲಿ ಘಟನೆ ನಡೆದಿದೆ. ಮುಗ್ದ ಬಾಲಕನಿಗೆ ಶಿಕ್ಷಕ ಹಲ್ಲೆ ನಡೆಸಿದ ಕಾರಣ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಂತೆ. ಆದ್ರೆ ಅಲ್ಲಿ ಚಿಕಿತ್ಸೆ ಸಾಧ್ಯವಾಗದ ಕಾರಣ ಲಕ್ನೋ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಬಾಲಕ ಕಣ್ಣು ಕಳೆದುಕೊಂಡಿದ್ದು, ಕಣ್ಣು ತೆಗೆಯುವ ಅನಿವಾರ್ಯತೆ ಎದುರಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಾಲಕ ಸಂಖ್ಯೆಯನ್ನು ಸರಿಯಾಗಿ ಹೇಳಲಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕ ಈ ಘೋರ ಶಿಕ್ಷೆ ನೀಡಿದ್ದಾನೆ ಎನ್ನಲಾಗ್ತಿದೆ. 7 ವರ್ಷದ ಲವಕುಶ ಕಣ್ಣು ಕಳೆದುಕೊಂಡ ಬಾಲಕ. ಜುಲೈ 25ರಂದು ಶಿಕ್ಷಕ, ಬಾಲಕನಿಗೆ ಬೈದಿದ್ದಲ್ಲದೆ ಕಣ್ಣಿಗೆ ಪೆನ್ನು ಚುಚ್ಚಿದ್ದಾನಂತೆ. ಬಾಲಕನ ಕಣ್ಣಿನಿಂದ ರಕ್ತ ಬಂದಿದೆಯಂತೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೂಕ್ತ ತನಿಖೆ ನಂತ್ರ ಕ್ರಮಕೈಗೊಳ್ಳುವುದಾಗಿ ಹೇಳ್ತಿದ್ದಾರೆ. ಪಾಲಕರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಶಾಲೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಕ ಮಾತ್ರ ತನ್ನ ಮೇಲೆ ಬಂದಿರುವ ಆರೋಪವನ್ನು ತಳ್ಳಿಹಾಕಿದ್ದಾನೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...