alex Certify
ಕನ್ನಡ ದುನಿಯಾ       Mobile App
       

Kannada Duniya

ಉಂಗುರ ಕಳೆದಿದ್ದಕ್ಕೆ ಯುವತಿಯ ಬಟ್ಟೆ ಬಿಚ್ಚಿಸಿದರು

fire m 4

ಬಳ್ಳಾರಿ: ಮನೆಕೆಲಸಕ್ಕೆ ಬಂದಿದ್ದ ಯುವತಿ ಉಂಗುರ ಕಳವು ಮಾಡಿದ್ದಾಳೆ ಎಂದು ಆರೋಪಿಸಿ, ಯುವತಿಯೊಬ್ಬಳ ಬಟ್ಟೆ ಬಿಚ್ಚಿಸಿ ಪರಿಶೀಲನೆ ನಡೆಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಬಳ್ಳಾರಿಯ ಉದ್ಯಮಿಯೊಬ್ಬರ ಮನೆಯಲ್ಲಿ ಮಹಿಳೆಯೊಬ್ಬಳು ಕೆಲಸ ಮಾಡುತ್ತಿದ್ದು, ಆಕೆಗೆ ಹುಷಾರಿಲ್ಲದ ಕಾರಣ, ಆಕೆಯ ಮಗಳು ಕೆಲಸಕ್ಕೆ ಹೋಗಿದ್ದಳು. ಈ ಸಂದರ್ಭದಲ್ಲಿ ಆಕೆ ಉಂಗುರ ಕದ್ದಿದ್ದಾಳೆ ಎಂದು ಆರೋಪಿಸಿ, ಉದ್ಯಮಿಯ ಪುತ್ರ ಯುವತಿಯ ಬಟ್ಟೆ ಬಿಚ್ಚಿಸಿ ಪರಿಶೀಲನೆ ಮಾಡಿದ್ದಾನೆ. ಯುವತಿ ಪೊಲೀಸರಿಗೆ ದೂರು ನೀಡಲು ಮುಂದಾದರೂ ಸ್ವೀಕರಿಸಿಲ್ಲ ಎನ್ನಲಾಗಿದೆ.ಇದರಿಂದ ಮನನೊಂದ ಯುವತಿ, ಮನೆಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.

ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಶೇ.80 ರಷ್ಟು ಸುಟ್ಟಗಾಯಗಾಗಿವೆ. ಆಕೆ ದೂರು ನೀಡಿದ್ದರೂ, ಪೊಲೀಸರು ಸ್ವೀಕರಿಸದ ಕಾರಣ, ಹೀಗೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಮುಂದಿನ ಕ್ರಮ ಜರುಗಿಸಿದ್ದಾರೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...