alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಗೆ ಬೆಂಕಿ ಹಚ್ಚಿದ ಪತಿ; ಕಾರಣ ಗೊತ್ತಾ?

fire

ಗಂಡ, ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿಗೆ ಅಪವಾದ ಎನ್ನುವಂತೆ ಕೆಲವರು ಜಗಳವಾಡುವುದನ್ನೇ ಕಾಯಕ ಮಾಡಿಕೊಂಡಿರುತ್ತಾರೆ. ಹೀಗೆ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ತಾಲ್ಲೂಕಿನ ಕೊಮ್ಮನಾಳ್ ಗ್ರಾಮದ ಕೂಲಿ ಕಾರ್ಮಿಕ ಕುಟುಂಬದ ಮಂಜಾನಾಯ್ಕ ಹಾಗೂ ಜ್ಯೋತಿಬಾಯಿ ಅನ್ಯೋನ್ಯವಾಗಿಯೇ ಇದ್ದರು. ಆದರೆ, ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಜಗಳ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಮಂಜಾನಾಯ್ಕ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ತೀವ್ರ ಸುಟ್ಟಗಾಯಗಳಾಗಿರುವ ಜ್ಯೋತಿಬಾಯಿ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಪತ್ನಿಗೆ ಬೆಂಕಿ ಹಚ್ಚಿದ ಮಂಜಾನಾಯ್ಕ ಪರಾರಿಯಾಗಿದ್ದಾನೆ.

ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ತೆರಳಿದ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ. ಪತ್ನಿ ಕೂಲಿ ಕೆಲಸಕ್ಕೆ ಹೋಗದ ಕಾರಣ ಮಂಜಾನಾಯ್ಕ ಜಗಳ ಆರಂಭಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...