alex Certify
ಕನ್ನಡ ದುನಿಯಾ       Mobile App
       

Kannada Duniya

ಪುದುಚೇರಿ ಮಾಜಿ ಸಚಿವ ಶಿವಕುಮಾರ್ ಹತ್ಯೆ

former-puducherry-minister-vmc-sivakumarಪುದುಚೇರಿಯ ಮಾಜಿ ಸಚಿವ ವಿ.ಎಂ.ಸಿ. ಶಿವಕುಮಾರ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕಟ್ಟಡವೊಂದರ ಕಾಮಗಾರಿ ವೀಕ್ಷಣೆಗಾಗಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆ ಸಮೀಪದ ಕಾರೈಕಲ್ ನಲ್ಲಿ ಮಂಗಳವಾರದಂದು ಈ ಘಟನೆ ನಡೆದಿದೆ.

ಶಿವಕುಮಾರ್ ಅವರಿದ್ದ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಚ್ಚಿನಿಂದ ತೀವ್ರವಾಗಿ ಥಳಿಸಿದ್ದಾರೆ. ಕೂಡಲೇ ಅವರನ್ನು ಸನಿಹದ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ.

ಒಟ್ಟು ಐದು ಅವಧಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಶಿವಕುಮಾರ್ ನಾಲ್ಕು ಬಾರಿ ಡಿಎಂಕೆ ಟಿಕೇಟ್ ನಿಂದ ಹಾಗೂ ಒಂದು ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾಯಿತರಾಗಿದ್ದರು. ಇತ್ತೀಚೆಗೆ ಎಐಎಡಿಎಂಕೆ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಶಿವಕುಮಾರ್ ಈ ಹಿಂದೆ ಸಚಿವ ಹಾಗೂ ವಿಧಾನಸಭೆ ಸ್ಪೀಕರ್ ಆಗಿಯೂ ಕಾರ್ಯ ನಿರ್ವಹಿಸಿದ್ದರು.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...