alex Certify
ಕನ್ನಡ ದುನಿಯಾ       Mobile App
       

Kannada Duniya

ವಿಷಯುಕ್ತ ಟೀ ಸೇವಿಸಿ ಒಂದೇ ಕುಟುಂಬದ ನಾಲ್ವರ ಸಾವು

ಬಿಹಾರದ ಮುಜಾಫರ್ ನಗರದಲ್ಲಿ ನೋವಿನ ಘಟನೆಯೊಂದು ನಡೆದಿದೆ. ವಿಷಪೂರಿತ ಟೀ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಪರು ಪೊಲೀಸ್ ಠಾಣಾ ವ್ಯಾಪ್ತಿಯ ವಹದೀನ್ಪುರದಲ್ಲಿ ಘಟನೆ ನಡೆದಿದೆ.

ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆಂದು ಮೂಲಗಳು ಹೇಳಿವೆ. ಕುಟುಂಬದ ಮಗುವೊಂದರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೀಟನಾಶಕಯುಕ್ತ ಟೀ ಸೇವನೆ ಮಾಡಿದ್ದರಿಂದ ಈ ದುರ್ಘಟನೆ ನಡೆದಿದೆ ಎಂದು ಮೂಲಗಳು ಹೇಳಿವೆ.

ಕಳೆದ ಎರಡು ದಿನಗಳಿಂದ ಬಿಹಾರದಲ್ಲಿ ವಿಷಯುಕ್ತ ಟೀ ಸೇವನೆ ಮಾಡಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಚಿಪ್ರಾದಲ್ಲಿ ವಿಷಯುಕ್ತ ಟೀ ಸೇವನೆ ಮಾಡಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದರು. ಆ ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...