alex Certify
ಕನ್ನಡ ದುನಿಯಾ       Mobile App
       

Kannada Duniya

ಮಲಗಿದಲ್ಲೇ ಪತ್ನಿಯನ್ನು ಕೊಂದ ಪತಿ, ಕಾರಣ ಗೊತ್ತಾ…?

ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋವನಾಳ ಗ್ರಾಮದಲ್ಲಿ ಮಲಗಿದಲ್ಲೇ ಗೃಹಿಣಿಯನ್ನು ಹತ್ಯೆ ಮಾಡಲಾಗಿದೆ. 30 ವರ್ಷದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಕೆಯ ಪತಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ಗೋವನಾಳ ಗ್ರಾಮದ ನಿವಾಸಿಗಳಾಗಿರುವ ದಂಪತಿ ನಡುವೆ ಕೌಟುಂಬಿಕ ಕಾರಣಗಳಿಂದ ಆಗಾಗ ಜಗಳವಾಗಿದೆ. ಇದರಿಂದ ಆಕ್ರೋಶಗೊಂಡ ಪತಿರಾಯ, ಮಲಗಿದ್ದ ಪತ್ನಿಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದು, ಬಳಿಕ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದಾನೆ. ಆತನನ್ನು ವಶಕ್ಕೆ ಪಡೆದ ಲಕ್ಷ್ಮೇಶ್ವರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...