alex Certify
ಕನ್ನಡ ದುನಿಯಾ       Mobile App
       

Kannada Duniya

ಕಚೇರಿಯಿಂದ ಹೊರಗೆಳೆದು ಜನಪ್ರತಿನಿಧಿ ಮೇಲೆ ಹಲ್ಲೆ

cri-m-oct-13

ಗದಗ: ಕಚೇರಿಯಿಂದ ಹೊರಗೆಳೆದು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಶಿರಹಟ್ಟಿ ತಾಲ್ಲೂಕಿನ ಹುಲ್ಲೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಉಪಾಧ್ಯಕ್ಷ ಎಂ.ಎಂ. ಗಾಡಗೊಳೆ ಕಚೇರಿಯಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಏಕಾಏಕಿ ನುಗ್ಗಿದ 10 ಕ್ಕೂ ಹೆಚ್ಚು ಮಂದಿ, ಅವರನ್ನು ಹೊರಗೆ ಎಳೆದು ತಂದಿದ್ದಾರೆ. ಮನೆ ಹಂಚಿಕೆ ವಿಚಾರಕ್ಕೆ ಜಗಳ ತೆಗೆದು, ಮನಬಂದಂತೆ ಹಲ್ಲೆ ನಡೆಸಿದ್ದು,  ಗಾಡಗೊಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅವರ ತಲೆಗೆ ಪೆಟ್ಟು ಬಿದ್ದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಲಕ್ಷ್ಮೇಶ್ವರ ಠಾಣೆ ಪೊಲೀಸರು,  ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...