alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯಕರನ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ

rape m 25

ಚಿಕ್ಕಬಳ್ಳಾಪುರ: ಪ್ರಿಯಕರನನ್ನು ನೋಡಲು ಬಂದಿದ್ದ ಯುವತಿ ಮೇಲೆ, ಆಟೋ ಚಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ, ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತುಮಕೂರು ಮೂಲದ ಯುವತಿ ಇಲ್ಲಿನ ಯುವಕನನ್ನು ಪ್ರೀತಿಸುತ್ತಿದ್ದಳು.

ಆತನನ್ನು ನೋಡಲು ಶುಕ್ರವಾರ ಯುವತಿ ಚಿಕ್ಕಬಳ್ಳಾಪುರಕ್ಕೆ ಬಂದಿದ್ದು, ಇಬ್ಬರೂ ದಿನವಿಡಿ ಸುತ್ತಾಡಿದ್ದಾರೆ. ಯುವಕ ರಾತ್ರಿ ಕೆಲಸಕ್ಕೆ ಹೋಗಬೇಕಿದ್ದರಿಂದ ಆಕೆಯನ್ನು ಬಸ್ ನಿಲ್ದಾಣಕ್ಕೆ ಬಿಟ್ಟು ಹೋಗಿದ್ದಾನೆ. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಆತನ ಸ್ನೇಹಿತರಾದ ಮೂವರು ಆಟೋ ಚಾಲಕರು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ.

ಹೊಸಹಳ್ಳಿ ರಸ್ತೆಯಲ್ಲಿ ಪೊಲೀಸರನ್ನು ಕಂಡ ಆರೋಪಿಗಳು ಪರಾರಿಯಾಗಲೆತ್ನಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಹಿಡಿದು ವಿಚಾರಣೆ ನಡೆಸಿದಾಗ, ಸಂಗತಿ ಬೆಳಕಿಗೆ ಬಂದಿದ್ದು, ಯುವತಿಗೆ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಆರೋಪಿಗಳು ಹಾಗೂ ಪ್ರಿಯಕರನ ವಿಚಾರಣೆ ನಡೆದಿದೆ ಎಂದು ತಿಳಿದುಬಂದಿದೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...