alex Certify
ಕನ್ನಡ ದುನಿಯಾ       Mobile App
       

Kannada Duniya

ಚಲಿಸುವ ಕಾರಿನಲ್ಲಿಯೇ ನಡೆಯಿತು ಗ್ಯಾಂಗ್ ರೇಪ್

gangrape_car

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೇ ಸಾಗಿದ್ದು, 23 ವರ್ಷದ ಯುವತಿ ಮೇಲೆ ಆಕೆಯ ಸ್ನೇಹಿತರೇ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಹೇಯ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪುಣೆಯಲ್ಲಿ ಈ ಘಟನೆ ನಡೆದಿದ್ದು 23 ವರ್ಷದ ಯುವತಿಯೊಬ್ಬಳು ಇಲ್ಲಿನ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಈಕೆಯ ಗೆಳೆಯನಾಗಿದ್ದ ಮನೀಷ್‌ ಎಂಬಾತ ಭಾನುವಾರ ಊಟಕ್ಕೆ ಕರೆದಿದ್ದು, ಆತನ ಆಹ್ವಾನದ ಮೇರೆಗೆ ಆಕೆ ಇತರ ಗೆಳೆಯರೊಂದಿಗೆ ಪಾರ್ಟಿಗೆ ತೆರಳಿದ್ದಾಳೆ. ರಾತ್ರಿ 11 ಘಂಟೆಗೆ ಊಟ ಮುಗಿಸಿ ಕಾರಿನಲ್ಲಿ ಹಿಂತಿರುಗುವ ಸಮಯದಲ್ಲಿ ಕಾರಿನಲ್ಲಿದ್ದ ಆಕೆಯ ಗೆಳೆಯರು ಆಕೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...