alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪಾಪಿಗಳು

ಉನ್ನಾವ್ ಹಾಗೂ ಕತುವಾ ಅತ್ಯಾಚಾರ ಪ್ರಕರಣ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಮಧ್ಯೆ ರಾಜಸ್ಥಾನದ ಭರತ್ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ಪಾಪಿಗಳು ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.

ಮೂವರು ಹುಡುಗ್ರು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಮಾರ್ಚ್ 31ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲಾಗಿತ್ತು. ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಪಾಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದರು. ನಂತ್ರ ಬಾಲಕಿಯನ್ನು ರಸ್ತೆಗೆ ಎಸೆದು ಹೋಗಿದ್ದರು.

ಬಾಲಕಿ ಕುಟುಂಬಸ್ಥರ ಮುಂದೆ ನಡೆದ ಘಟನೆಯನ್ನು ವಿವರಿಸಿದ್ದಳು. ಘಟನೆ ನಂತ್ರ ಬಾಲಕಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಮೂವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಆದ್ರೆ ಈವರೆಗೂ ಯಾರನ್ನೂ ಬಂಧಿಸಿಲ್ಲ. ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲವೆಂದು ಬಾಲಕಿ ತಂದೆ ಆರೋಪ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...