alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಗೆ ಪೀಡಿಸುತ್ತಿದ್ದ ಪಾಗಲ್ ಪ್ರೇಮಿ ಮಾಡಿದ್ದೇನು?

ಯುವತಿಯೊಬ್ಬಳನ್ನು ಏಕಮುಖವಾಗಿ ಪ್ರೀತಿಸುತ್ತಿದ್ದವನೊಬ್ಬ ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದು, ಯುವತಿ ನಿರಾಕರಿಸಿದಳೆಂಬ ಕಾರಣಕ್ಕೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

18 ವರ್ಷದ ಲವ್ಲಿ ಮಿಶ್ರಾ ಅಲಿಯಾಸ್ ಇಲೂ ಸಾವಿಗೀಡಾಗಿದ್ದು, ಈಕೆ ತನ್ನ ಚಿಕ್ಕಪ್ಪನೊಂದಿಗೆ ರಾಮನಾಥ್ ಕಾಲೋನಿಯಲ್ಲಿ ವಾಸಿಸುತ್ತಿದ್ದಳೆನ್ನಲಾಗಿದೆ.

ಲವ್ಲಿ ಮಿಶ್ರಾ, ಕೇರಾ ಜಲಾಲ್ ಪುರ್ ಗ್ರಾಮದವಳಾಗಿದ್ದು, ಅದೇ ಗ್ರಾಮದ 18 ವರ್ಷದ ಅಮಿತ್ ಆಕೆಗೆ ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.

ಶನಿವಾರದಂದು ಅಮಿತ್, ತನ್ನ ಸಹೋದರ ಹಾಗೂ ಇಬ್ಬರು ಸಹೋದರಿಯರೊಂದಿಗೆ ಲವ್ಲಿ ಮಿಶ್ರಾಳ ಮನೆಗೆ ಬಂದಿದ್ದು, ಮದುವೆಯಾಗುವಂತೆ ಕೇಳಿದ್ದಾನೆ. ಇದಕ್ಕೆ ನಿರಾಕರಿಸುತ್ತಿದ್ದಂತೆ ಕೋಪಗೊಂಡು ಆಕೆ ಮೇಲೆ ಗುಂಡಿನ ಮಳೆಗರೆದಿದ್ದು, ಆಕೆ ಸ್ಥಳದಲ್ಲೆ ಸಾವನ್ನಪ್ಪಿದ್ದಾಳೆ.

ಘಟನೆಯಲ್ಲಿ ಲವ್ಲಿ ಮಿಶ್ರಾಳ ಸಹೋದರಿಯೂ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...