alex Certify
ಕನ್ನಡ ದುನಿಯಾ       Mobile App
       

Kannada Duniya

ಮರಣೋತ್ತರ ಪರೀಕ್ಷೆ ಬಿಚ್ಚಿಟ್ಟಿದೆ ಭಯಾನಕ ಸತ್ಯ

Representational Imageಫೆಬ್ರವರಿ 16 ರಂದು ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ಬಾಲಕಿಯ ಶವ ಉತ್ತರ ಪ್ರದೇಶ ಮುಖ್ಯಮಂತ್ರಿ ನಿವಾಸದ ಬಳಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ಹಲವು ಭಯಾನಕ ಸತ್ಯಗಳನ್ನು ತೆರೆದಿಟ್ಟಿದೆ.

ಫೆಬ್ರವರಿ 10 ರಂದು ಶಾಲೆಗೆ ಹೋಗಿದ್ದ 12 ನೇ ತರಗತಿ ವಿದ್ಯಾರ್ಥಿನಿ ವಾಪಾಸ್ ಮನೆಗೆ ಬರದ ಕಾರಣ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಬಾಲಕಿಯ ಶವ ಮುಖ್ಯಮಂತ್ರಿ ನಿವಾಸದ ಬಳಿ ಪತ್ತೆಯಾಗಿತ್ತು. ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು, ಮೇಲ್ನೋಟಕ್ಕೆ ತಿಳಿದುಬಂದಿತ್ತಾದರೂ ಇದೀಗ ಹೊರ ಬಿದ್ದಿರುವ ಮರಣೋತ್ತರ ಪರೀಕ್ಷಾ ವರದಿ ಬೆಚ್ಚಿ ಬೀಳಿಸುವಂತಿದೆ.

ವಿದ್ಯಾರ್ಥಿನಿಯ ಮೇಲೆ 21 ಮಂದಿ ಅತ್ಯಾಚಾರವೆಸಗಿದ್ದಾರೆಂದು ವೈದ್ಯರು ತಮ್ಮ ವರದಿಯಲ್ಲಿ ತಿಳಿಸಿದ್ದಾರಲ್ಲದೇ ಈ ವೇಳೆ ತೀವ್ರ ರಕ್ತಸ್ರಾವದಿಂದ ಆಕೆ ಸಾವನ್ನಪ್ಪಿದ್ದು, ಬಳಿಕವೂ ಆಕೆಯ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಮರಣೋತ್ತರ ಪರೀಕ್ಷೆ ವರದಿ ಆಧಾರದ ಮೇಲೆ ಪೊಲೀಸರು ಈಗ ಮತ್ತೇ ಹೊಸದಾಗಿ ತನಿಖೆ ನಡೆಸಲು ಮುಂದಾಗಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...