alex Certify
ಕನ್ನಡ ದುನಿಯಾ       Mobile App
       

Kannada Duniya

ನಾಪತ್ತೆಯಾಗಿದ್ದ ಬಾಲಕಿ ವಾಮಾಚಾರಕ್ಕೆ ಬಲಿ…?

ದೆಹಲಿಯಲ್ಲಿ ಅಪ್ರಾಪ್ತೆಯೊಬ್ಬಳ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಟ ಮಂತ್ರ ಮಾಡಿ ಬಾಲಕಿಯನ್ನು ಕೊಂದಿರಬಹುದು ಅಂತಾ ಹೆತ್ತವರು ಶಂಕಿಸಿದ್ದಾರೆ. ಬುಧವಾರ ರಾತ್ರಿ 11 ಗಂಟೆ ವೇಳೆಗೆ ಮಗಳು ನಾಪತ್ತೆಯಾಗಿದ್ದಾಳೆ ಅಂತಾ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದ.

ಮನೆಯೊಳಗೆ ತಮ್ಮನ ಜೊತೆ ಆಟವಾಡುತ್ತಿದ್ದ ಕಾಜಲ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ಲು. ಅಕ್ಕಪಕ್ಕದ ಮನೆಗಳಲ್ಲೆಲ್ಲ ಹುಡುಕಾಡಿದ್ರೂ ಬಾಲಕಿಯ ಸುಳಿವೇ ಇರಲಿಲ್ಲ. ಬಳಿಕ ಕತ್ತು ಸೀಳಿದ ಸ್ಥಿತಿಯಲ್ಲಿ ಮನೆಯ ಟೆರೆಸ್ ಮೇಲೆ ಆಕೆಯ ಮೃತದೇಹ ಪತ್ತೆಯಾಗಿದೆ.

ಕಾಜಲ್ ಹೆತ್ತವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅದೇ ಮನೆಯಲ್ಲಿ ಇನ್ನೂ 6 ಕುಟುಂಬಗಳು ವಾಸಿಸುತ್ತಿವೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರಬಹುದು ಅಂತಾ ಪೊಲೀಸರು ಶಂಕಿಸಿದ್ದಾರೆ. ಘಟನೆ ಬಳಿಕ ಕಟ್ಟಡದಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಆತನ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳನ್ನು ಕೂಡ ಪರಿಶೀಲಿಸಲಾಗ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...