alex Certify
ಕನ್ನಡ ದುನಿಯಾ       Mobile App
       

Kannada Duniya

ಬೀಚ್ ನಲ್ಲಿ ಬಟ್ಟೆ ಬಿಚ್ಚಿ ಫೋಟೋ ಕ್ಲಿಕ್ಕಿಸಿ ಬಾಯ್ ಫ್ರೆಂಡ್ ಮುಂದೆಯೇ….

ಪ್ರವಾಸಿಗರ ಮೆಚ್ಚಿನ ಸ್ಥಳ ಗೋವಾದಲ್ಲಿ ವಿದೇಶಿ ಯುವತಿ ಮೇಲೆ ಅತ್ಯಾಚಾರ ನಡೆದ ಪ್ರಕರಣ ಬೆಳಕಿಗೆ ಬಂದಿದೆ. ಸಮುದ್ರ ತೀರದಲ್ಲಿ ವಿದೇಶಿ ಜೋಡಿಯನ್ನು ಬೇರ್ಪಡಿಸಿದ ಕಾಮುಕರು ಬಟ್ಟೆ ಬಿಚ್ಚಿ ಫೋಟೋ ಕ್ಲಿಕ್ಕಿಸಿದ್ದಾರೆ. ನಂತ್ರ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ. ಕೊನೆಯಲ್ಲಿ ಪ್ರಿಯಕರನ ಮುಂದೆಯೇ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾರೆಂಬ ಆರೋಪ ಕೇಳಿ ಬಂದಿದೆ.

ದಕ್ಷಿಣ ಗೋವಾ ಸಮುದ್ರ ತೀರದಲ್ಲಿ ಮೇ 24ರ ರಾತ್ರಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ. ಆದ್ರೆ ಆರೋಪಿಗಳ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈವರೆಗೂ ಯಾರನ್ನೂ ಬಂಧಿಸಿಲ್ಲ. ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಗೋವಾ ಬೀಚ್ ನಲ್ಲಿ ಯುವ ಜೋಡಿಯ ಜೊತೆ ಮಾತನಾಡಲು ಯತ್ನಿಸಿದ ಮೂವರು ಆರೋಪಿಗಳು ಮೊದಲು ಇಬ್ಬರ ಬಟ್ಟೆ ಬಿಚ್ಚಿದ್ದಾರಂತೆ. ಫೋಟೋ ಹೊಡೆದು ಹಣ ನೀಡುವಂತೆ ಕೇಳಿದ್ದಾರಂತೆ. ನಂತ್ರ 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರಂತೆ.

ಗೋವಾದಲ್ಲೂ ಅತ್ಯಾಚಾರಿಗಳ ಸಂಖ್ಯೆ ಹೆಚ್ಚಾಗ್ತಿದೆ. ಕೆಲ ದಿನಗಳ ಹಿಂದೆ ದೆಹಲಿಯಿಂದ ಗೋವಾಕ್ಕೆ ಬಂದಿದ್ದ ಇಬ್ಬರು ಯುವತಿಯರ ಮೇಲೆ ಅತ್ಯಾಚಾರ ನಡೆದ ಪ್ರಕರಣ ದಾಖಲಾಗಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...