alex Certify
ಕನ್ನಡ ದುನಿಯಾ       Mobile App
       

Kannada Duniya

ಹರ್ಯಾಣದಲ್ಲಿ ಒಂದೇ ದಿನ 2 ಕಡೆ ಗ್ಯಾಂಗ್ ರೇಪ್

ಹರ್ಯಾಣ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಒಂದೇ ದಿನ ಎರಡು ಕಡೆ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ಯಮುನಾನಗರದಲ್ಲಿ ಶಾಲಾ ಶಿಕ್ಷಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆ. ಸೋನಿಪತ್ ನಲ್ಲಿ 19 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.

ಪೊಲೀಸ್ ಪ್ರಕಾರ ಯಮುನಾ ನಗರದಲ್ಲಿ 57 ವರ್ಷದ ಶಿಕ್ಷಕಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಶಿಕ್ಷಕಿ ಬಟ್ಟೆ ಅಸ್ತವ್ಯಸ್ತವಾಗಿತ್ತು. ಮುಖಕ್ಕೆ ಗಾಯಗಳಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಶಿಕ್ಷಕಿ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದಳು ಎನ್ನಲಾಗಿದೆ. ಕಾಮುಕರು ಹತ್ಯೆ ನಡೆಸಿದ್ದಲ್ಲದೆ ಮನೆ ಸಾಮಾನುಗಳನ್ನು ದೋಚಿದ್ದಾರೆಂದು ಸಂಬಂಧಿಕರು ಆರೋಪಿಸಿದ್ದಾರೆ.

ಸೋನಿಪತ್ ನಲ್ಲಿ 19 ವರ್ಷದ ಯುವತಿ ಆಧಾರ್ ಕಾರ್ಡ್ ತಯಾರಿಸಲು ಹೋಗುತ್ತಿದ್ದ ವೇಳೆ ಅಪಹರಿಸಿ ಅತ್ಯಾಚಾರವೆಸಗಲಾಗಿದೆ. ಈ ಬಗ್ಗೆ ಯಾರಿಗೂ ಹೇಳದಂತೆ ದುಷ್ಟರು ಬೆದರಿಕೆ ಹಾಕಿದ್ದಾರೆ. ಎರಡೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರುಮಾಡಿದ್ದಾರೆ. ಈವರೆಗೂ ಆರೋಪಿಗಳ ಬಂಧನವಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...