alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಹರಿಸಿ ಅತ್ಯಾಚಾರವೆಸಗಿದ ನಂತ್ರ ಈ ಕೆಲ್ಸ ಮಾಡಿದ್ರು

ಉತ್ತರ ಪ್ರದೇಶದ ಹಾರ್ಡೊಯ್ ನಲ್ಲಿ ಹಳೆಯ ದ್ವೇಷಕ್ಕೆ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ. ಗ್ಯಾಂಗ್ ರೇಪ್ ಮಾಡಿದ ಆರೋಪಿಗಳು ಯುವತಿಯ ಖಾಸಗಿ ಅಂಗವನ್ನು ಗಾಯಗೊಳಿಸಿದ್ದಾರೆ. ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ.

ಘಟನೆ ನಡೆದಿರುವುದು ಹಾರ್ಡೊಯ್ ನ ಲೋನಾರ್ ಎಂಬಲ್ಲಿ. ಯುವತಿ ಕುಟುಂಬಸ್ಥರು ನೀಡಿರುವ ಮಾಹಿತಿ ಪ್ರಕಾರ, ಯುವತಿ ಮನೆಯಲ್ಲಿ ಒಂಟಿಯಾಗಿರುವಾಗ ಮನೆಗೆ ಬಂದ ಕಿರಾತಕರು ಆಕೆಯನ್ನು ಅಪಹರಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆಸಿದ ನಂತ್ರ ಖಾಸಗಿ ಅಂಗಕ್ಕೆ ಏಟು ನೀಡಿದ್ದಾರೆ. ದುಷ್ಟರಿಂದ ತಪ್ಪಿಸಿಕೊಂಡು ಬಂದ ಯುವತಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾಳೆ. ಕುಟುಂಬಸ್ಥರು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಶುರುಮಾಡಿದ್ದು, ಹಳೆ ದ್ವೇಷಕ್ಕೆ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...