alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಮುಕನ ಕೃತ್ಯಕ್ಕೆ ನೊಂದ ಯುವತಿಯಿಂದ ಆತ್ಮಹತ್ಯೆ ಯತ್ನ

fire jaip

ಜೈಪುರ್: ಕಾಮುಕರು ಹೇಗೆಲ್ಲಾ ಇರುತ್ತಾರೆ ನೋಡಿ. ಯುವತಿ ಸ್ನಾನ ಮಾಡುವುದನ್ನು ಕದ್ದು ನೋಡಿದ ಕಾಮುಕನೊಬ್ಬ ಆಕೆಯ ಮನೆಯವರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಜೈಪುರದಲ್ಲಿ ನಡೆದಿದ್ದು, ಇದರಿಂದ ಮನನೊಂದ ಯುವತಿ ಬೆಂಕಿ ಹಚ್ಚಿಕೊಂಡಿದ್ದಾಳೆ.

ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದಾಳೆ. ಮನೆಯ ಶೆಡ್ ನಲ್ಲಿ ಯುವತಿ ಸ್ನಾನ ಮಾಡುವ ಸಂದರ್ಭದಲ್ಲಿ ಕಾಮುಕ ಯುವಕ ಕದ್ದು ನೋಡಿದ್ದಾನೆ. ಯುವತಿ ಚೀರಿದ್ದು, ಆಗ ಆಕೆಯ ಮನೆಯವರು ಯುವಕನನ್ನು ಹಿಡಿದು ಆತನ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಪೋಷಕರು ಇದನ್ನು ಒಪ್ಪದೇ, ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಇದಕ್ಕೆಲ್ಲಾ ನಾನೇ ಕಾರಣ ಎಂದು ಭಾವಿಸಿದ ಯುವತಿ ಮನನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಆಕೆಯ ಸ್ಥಿತಿ ಗಂಭೀರವಾಗಿದೆ. ನಾನು ಸ್ನಾನ ಮಾಡುವುದನ್ನು ಕದ್ದು ನೋಡಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಗಿ ಯುವತಿ ಪೊಲೀಸರಿಗೆ ಹೇಳಿಕೆ ನೀಡಿದ್ದು, ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವಕ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...