alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಶಿಕ್ಷಕಿ ಸೇರಿ ಐದು ಶಿಕ್ಷಕರಿಂದ ಲೈಂಗಿಕ ಕಿರುಕುಳ…?

ಹರ್ಯಾಣದ ಸೋನಿಪತ್ ನ ಖಂದ್ರಾಯಿ ಪ್ರೌಢಶಾಲೆ ವಿದ್ಯಾರ್ಥಿನಿಯೊಬ್ಬಳು ಬರೆದಿರುವ ಅನಾಮಧೇಯ ಪತ್ರ ಚರ್ಚೆಗೆ ಕಾರಣವಾಗಿದೆ. ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ಪತ್ರ ಬರೆದಿದ್ದಾಳೆ. ಪತ್ರದಲ್ಲಿ ಏನಿದೆ ಎಂಬುದನ್ನು ಪೊಲೀಸರು ಸ್ಪಷ್ಟಪಡಿಸುತ್ತಿಲ್ಲ. ಆದ್ರೆ ಪತ್ರದಲ್ಲಿ ಮಾಡಿರುವ ಆರೋಪ ಸುಳ್ಳೆಂದು ಪ್ರೌಢಶಾಲೆ ಪ್ರಾಂಶುಪಾಲರು ಹೇಳ್ತಿದ್ದಾರೆ.

ಮೂಲಗಳ ಪ್ರಕಾರ ವಿದ್ಯಾರ್ಥಿನಿ, ಮಹಿಳಾ ಶಿಕ್ಷಕಿ ಸೇರಿದಂತೆ  5 ಶಿಕ್ಷಕರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸುವಂತೆ ಬಿಇಓಗೆ ಆದೇಶ ಮಾಡಿದ್ದಾರೆ.

ಶಾಲೆ ಹೆಸರು ಹಾಳು ಮಾಡಲು ಯಾರೋ ಈ ರೀತಿ ಮಾಡಿದ್ದಾರೆ. ಶಾಲೆಯಲ್ಲಿ ಇಂಥಹ ಯಾವುದೇ ಘಟನೆ ನಡೆದಿಲ್ಲವೆಂದು ಪ್ರಾಂಶುಪಾಲರು ಹೇಳಿದ್ದಾರೆ. ತನಿಖೆ ವೇಳೆ ಸಹಕರಿಸುವಂತೆ ಎಲ್ಲ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...