alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತೆ ಮೊಮ್ಮಗಳ ಬಾಳು ಹಾಳು ಮಾಡಿದ ಅಜ್ಜ

ಮಧ್ಯಪ್ರದೇಶದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣ ನಡೆಯುತ್ತಿದೆ. ಈಗ ಟಿಕಾಮಗರ್ನಲ್ಲಿ ಸಂಬಂಧಕ್ಕೆ ಕಳಂಕ ತರುವಂತಹ ಘಟನೆ ನಡೆದಿದೆ. ತಾತನೊಬ್ಬ 11 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿ ಪರಾರಿಯಾಗಿದ್ದಾನೆ.

ಆರೋಪಿ ಪರಮಲಾಲ್ ತನ್ನ ಮಗಳ ಮನೆಗೆ ಬಂದಿದ್ದ ಎನ್ನಲಾಗಿದೆ. ಮಗಳ ಮಗಳು 11 ವರ್ಷದ ಮೊಮ್ಮಗಳು ಒಬ್ಬಳೆ ಮಲಗಿದ್ದಾಗ ರಾತ್ರಿ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಪೀಡಿತೆ ತಾಯಿ ಪೊಲೀಸರಿಗೆ ಕರೆ ಮಾಡಿ ವಿಷ್ಯ ತಿಳಿಸಿದ್ದಾಳೆ. ಪೀಡಿತೆ ತಾಯಿ 100ಕ್ಕೆ ಡಯಲ್ ಮಾಡಿ ದೂರು ನೀಡಿದ್ದಳು. ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಲಕಿಯ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ.

ಆರೋಪಿ ಪರಮಲಾಲ್ ನಾಪತ್ತೆಯಾಗಿದ್ದಾನೆ. ಆತನ ಹುಡುಕಾಟ ಶುರುವಾಗಿದೆ. ಶೀಘ್ರದಲ್ಲಿಯೇ ಆರೋಪಿ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...