alex Certify
ಕನ್ನಡ ದುನಿಯಾ       Mobile App
       

Kannada Duniya

ಹೈವೇನಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ತೆರಳುತ್ತಿದ್ದ ನವ ವಿವಾಹಿತರಿದ್ದ ವಾಹನದ ಮೇಲೆ ದಾಳಿ ನಡೆಸಿದ ಶಸ್ತ್ರಸಜ್ಜಿತ ದರೋಡೆಕೋರರು ವಧುವಿಗೆ ಗುಂಡಿಕ್ಕಿ ಹತ್ಯೆ ಮಾಡಿ ನಗ-ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ಮೀರತ್ ಜಿಲ್ಲೆಯ ದೌರಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮಟೋರಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಗಾಜಿಯಾಬಾದ್ ನಲ್ಲಿ ವಿವಾಹ ಸಮಾರಂಭ ಮುಗಿದ ಬಳಿಕ ನವ ವಿವಾಹಿತರು ಕುಟುಂಬಸ್ಥರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು.

ಈ ವೇಳೆ ಎರಡು ಕಾರುಗಳಲ್ಲಿ ಬಂದ ಶಸ್ತ್ರಸಜ್ಜಿತ ದರೋಡೆಕೋರರು ನವ ವಿವಾಹಿತರಿದ್ದ ವಾಹನವನ್ನು ಅಡ್ಡಗಟ್ಟಿದ್ದಾರೆ. ಅವರುಗಳನ್ನು ಬೆದರಿಸಿ ನಗ-ನಗದು ಕಿತ್ತುಕೊಳ್ಳಲು ಮುಂದಾಗಿದ್ದು, ವಧು ಫರ್ಹಾನಾ ಪ್ರತಿಭಟಿಸಿದ್ದಾಳೆ.

ಆಗ ಆಕೆಯ ಮೇಲೆ ಗುಂಡು ಹಾರಿಸಿದ ದರೋಡೆಕೋರರು ಲಕ್ಷಾಂತರ ರೂ. ಮೌಲ್ಯದ ನಗ ದೋಚಿಕೊಂಡು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಫರ್ಹಾನಾಳನ್ನು ಕೂಡಲೇ ಮುಜಫರ್ ನಗರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...