alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತಿಷ್ಠಿತ ಆಸ್ಪತ್ರೆಯಲ್ಲೇ ಉದ್ಯೋಗಿ ಮೇಲೆ ಅತ್ಯಾಚಾರ

ಬೆಂಗಳೂರು: ಬೆಂಗಳೂರು ಸಂಪಂಗಿರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ.

ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಸೂಪರ್ ವೈಸರ್ ಅತ್ಯಾಚಾರ ಎಸಗಿದ್ದಾನೆ. ಬಾತ್ ರೂಂ ಕ್ಲೀನಿಂಗ್ ಮಾಡಲು ಮಹಿಳೆಯನ್ನು ಕೊಠಡಿಗೆ ಕರೆಸಿಕೊಂಡ ಕಾಮುಕ, ಬೆದರಿಸಿ ಅತ್ಯಾಚಾರ ಎಸಗಿದ್ದಾನೆ.

ಆಸ್ಪತ್ರೆಯ 4 ನೇ ಮಹಡಿಯ 7 ನೇ ಕೊಠಡಿಗೆ ಮಹಿಳೆಯನ್ನು ಕರೆಸಿಕೊಂಡು ಕ್ಲೀನಿಂಗ್ ಮಾಡುವಂತೆ ಹೇಳಿದ್ದಾನೆ. ಬಳಿಕ ರೂಂ ಲಾಕ್ ಮಾಡಿ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾನೆ.

ಅಕ್ಟೋಬರ್ 15 ರಂದು ಘಟನೆ ನಡೆದಿದ್ದು, ಮನೆಗೆ ತೆರಳಿದ ಸಂತ್ರಸ್ಥೆ ಪತಿಗೆ ವಿಷಯ ತಿಳಿಸಿದ್ದಾರೆ. ಸಂಪಂಗಿರಾಮನಗರ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...