alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಷುಲ್ಲಕ ಕಾರಣಕ್ಕೆ ನಡೀತು ಘೋರ ಕೃತ್ಯ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹಳೆಹುಬ್ಬಳ್ಳಿಯ ಇಸ್ಲಾಂಪುರದಲ್ಲಿ ನಡೆದಿದೆ.

26 ವರ್ಷದ ಗುರುಸಿದ್ದಪ್ಪ ಅಂಬಿಗೇರ ಕೊಲೆಯಾದ ಯುವಕ. ಶ್ರೀರಾಮನವಮಿ ಪ್ರಯುಕ್ತ ರಾತ್ರಿ ಡಿಜೆ ಹಾಕುವ ವಿಚಾರಕ್ಕೆ 2 ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಗುರುಸಿದ್ದಪ್ಪ ಅವರ ಮೇಲೆ ಕಲ್ಲು ದೊಣ್ಣೆಯಿಂದ ಹಲ್ಲೆ ಮಾಡಿ, ಚಾಕುವಿನಿಂದ ಇರಿಯಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕಸಬಾ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...