alex Certify ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಮಹಿಳೆಯಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಮಹಿಳೆಯಿಂದ ಘೋರ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಪತಿಯನ್ನು ಕೊಲೆ ಮಾಡಿದ ಮಹಿಳೆ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ದಾಸರಹಳ್ಳಿ ನಿವಾಸಿ ಹರೀಶ್(24) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರ ಅಭಿಷೇಕ್, ಆತನ ಸ್ನೇಹಿತ ಮುಲ್ಲಾ ಅಲಿಯಾಸ್ ರಫಿ ಎಂಬುವರನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದ ಪತ್ನಿ ನಾಪತ್ತೆಯಾಗಿರುವುದಾಗಿ ಸುಳ್ಳು ದೂರು ದಾಖಲಿಸಿದ್ದಳು. ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...