alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗ: ಪತಿಯಿಂದ ಪತ್ನಿಯ ಹತ್ಯೆ

ಶಿವಮೊಗ್ಗ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಅಣ್ಣಾನಗರ 6ನೇ ತಿರುವಿನಲ್ಲಿ ನಡೆದಿದೆ.

ಗೀತಾ (30) ಮೃತಪಟ್ಟ ಮಹಿಳೆಯಾಗಿದ್ದಾರೆ. ಮದ್ಯ ಸೇವಿಸಿ ಮನೆಗೆ ಬಂದಿದ್ದ ಮೂರ್ತಿಯಪ್ಪ ಪತ್ನಿಯೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದು, ತೀವ್ರ ಪೆಟ್ಟುಬಿದ್ದು ಗೀತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೂರ್ತಿಯಪ್ಪ ಮತ್ತು ಗೀತಾರಿಗೆ ಮದುವೆಯಾಗಿ 9 ವರ್ಷವಾಗಿದ್ದು, ಮಕ್ಕಳಾಗಿರಲಿಲ್ಲ. ಇದೇ ವಿಚಾರವಾಗಿ ಮೂರ್ತಿಯಪ್ಪ ಪತ್ನಿಯೊಂದಿಗೆ ಜಗಳವಾಡಿ ತೀವ್ರತರ ಹಲ್ಲೆ ನಡೆಸಿದ್ದು, ಆಕೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...