alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ಪ್ರಪೋಸಲ್ ನಿರಾಕರಿಸಿದ್ದಕ್ಕೆ ಮಹಿಳೆಯ ಪ್ರಾಣ ತೆಗೆದ ಸಹೋದ್ಯೋಗಿ

ಹೈದ್ರಾಬಾದ್ ನಲ್ಲಿ 23 ವರ್ಷದ ಮಹಿಳೆಯನ್ನು ಸಹೋದ್ಯೋಗಿಯೇ ಹತ್ಯೆ ಮಾಡಿದ್ದಾನೆ. ಮದುವೆ ಪ್ರಪೋಸಲ್ ನಿರಾಕರಿಸಿದ್ದರಿಂದ ರೊಚ್ಚಿಗೆದ್ದು ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಮೂಸಾಪೇಟ್ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಅನಂತ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಜಾನಕಿ ಸೇಲ್ಸ್ ಗರ್ಲ್ ಆಗಿದ್ಲು. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯವಳು. ಸೂಪರ್ ಮಾರ್ಕೆಟ್ ಒಂದರಲ್ಲಿ ಕೆಲಸ ಮಾಡುತ್ತಿದ್ಲು. ನಿನ್ನೆ ಜಾನಕಿ ವಾಸವಾಗಿದ್ದ ಬಾಡಿಗೆ ಮನೆಗೆ ಬಂದ ಅನಂತ್ ಅವಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಈ ಹಿಂದೆ ಅನಂತ್, ಜಾನಕಿ ಜೊತೆಗೆ ಕೆಲಸ ಮಾಡುತ್ತಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಾನಕಿಯನ್ನು ನೋಡಿ ಆಕೆಯ ಸ್ನೇಹಿತೆ ಪೊಲೀಸರಿಗೆ ವಿಷಯ ತಿಳಿಸಿದ್ದಾಳೆ. ಹತ್ಯೆ ಬಳಿಕ ಅನಂತ್ ಕೂಡ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗ್ತಿದೆ.

 

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...