alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿಗೆ ಒಪ್ಪದ್ದಕ್ಕೆ ಆಸ್ಪತ್ರೆಯಲ್ಲೇ ನರ್ಸ್ ಬರ್ಬರ ಹತ್ಯೆ

ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ನರ್ಸನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ.

ಹಿಮಾಚಲ ಪ್ರದೇಶ ಮೂಲದ 23 ವರ್ಷದ ವೈಶಾಲಿ ಹತ್ಯೆಯಾಗಿರುವ ನರ್ಸ್ ಆಗಿದ್ದು, ಬುಧವಾರದಂದು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಬಂದಿದ್ದ ಆಕೆ, ತಾನು ಕಾರ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಯಲ್ಲೇ ಉತ್ತರಪ್ರದೇಶ ಮೂಲದ ಪವನ್ ಎಂಬಾತನಿಂದ ಹತ್ಯೆಗೀಡಾಗಿದ್ದಾಳೆ.

ವೈಶಾಲಿಯ ಕತ್ತುಸೀಳಿ ಹತ್ಯೆ ಮಾಡಿರುವ ಪವನ್, ಬಳಿಕ ತನ್ನ ಎರಡು ಕೈನ ಮಣಿಕಟ್ಟುಗಳನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಚಿಂತಾಜನಕ ಸ್ಥಿತಿಯಲ್ಲಿರುವ ಆತನನ್ನು ಆಸ್ಪತ್ರೆಯ ತೀವ್ರ ಚಿಕಿತ್ಸಾ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಸಾಕ್ಷ್ಯಾಧಾರಗಳ ಅನ್ವಯ ಆರೋಪಿ ಪವನ್ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪವನ್ ಹಾಗೂ ವೈಶಾಲಿ ಒಂದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಏಕಮುಖ ಪ್ರೀತಿ ಮಾಡುತ್ತಿದ್ದ ಆತ, ತನ್ನ ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಈ ಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...