alex Certify
ಕನ್ನಡ ದುನಿಯಾ       Mobile App
       

Kannada Duniya

ಅಮೆರಿಕದಲ್ಲಿರೋ ಭಾರತೀಯ ವೈದ್ಯನಿಗೆ ಜೈಲು

ಅಮೆರಿಕದಲ್ಲಿ ಭಾರತೀಯ ಮೂಲದ ವೈದ್ಯನಿಗೆ 10 ತಿಂಗಳುಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈತ ಆಸ್ಪತ್ರೆಗೆ ಬಂದ ರೋಗಿಗಳನ್ನು, ಅದರಲ್ಲೂ ಹೆಣ್ಣುಮಕ್ಕಳನ್ನು ಬಲವಂತವಾಗಿ ತಬ್ಬಿಕೊಳ್ಳುತ್ತಿದ್ದ. ಜೈಲು ಶಿಕ್ಷೆ ಪೂರ್ಣಗೊಂಡ ಬಳಿಕ ಈತನನ್ನು ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆ ಇದೆ.

40 ವರ್ಷದ ಅರುಣ್ ಅಗರ್ವಾಲ್ ಜೈಲು ಸೇರಿರುವ ವೈದ್ಯ. ಓಹಿಯೋನಲ್ಲಿರುವ ಡೇಟನ್ ಚಿಲ್ಡ್ರನ್ಸ್ ಆಸ್ಪತ್ರೆಯಲ್ಲಿ ಅರುಣ್ ಕರ್ತವ್ಯ ನಿರ್ವಹಿಸುತ್ತಿದ್ದ. 2013 ರಿಂದ 2015ರ ಅವಧಿಯಲ್ಲಿ ಇಬ್ಬರು ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಸ್ಪರ್ಷಿಸಿದ್ದ ಎಂಬ ಆರೋಪವಿತ್ತು.

ಆತನ ವಿರುದ್ಧ ಕೇಸ್ ಕೂಡ ದಾಖಲಾಗಿತ್ತು. ದೇಶ ಬಿಟ್ಟು ಓಡಿಹೋಗಲು ಪ್ರಯತ್ನಿಸುತ್ತಿದ್ದ ಅರುಣ್ ಅಗರ್ವಾಲ್ ನನ್ನು ಪೊಲೀಸರು ಬಂಧಿಸಿದ್ದರು. ಅರುಣ್ ಅಗರ್ವಾಲ್ ಕೃತ್ಯದ ಬಗ್ಗೆ ಆಸ್ಪತ್ರೆ ಪೊಲೀಸರಿಗೆ ಮೊದಲು ಮಾಹಿತಿ ನೀಡಿರಲಿಲ್ಲ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...