alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಯನ್ನು ಚಾಕುವಿನಿಂದ ಇರಿದ ಭಾರತೀಯ

ಸಿಂಗಾಪುರದಲ್ಲಿ ನೆಲೆಸಿರುವ ಭಾರತೀಯನೊಬ್ಬ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಚಾಕು ಇರಿತದಿಂದ ತೀವ್ರ ಗಾಯಗೊಂಡಿರುವ ಆತನ ಪತ್ನಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದು, ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

29 ವರ್ಷದ ಜಯಶೀಲನ್ ಚಂದ್ರಶೇಖರನ್ ತನ್ನ ಪತ್ನಿ 26 ವರ್ಷದ ಮಯೂರಿ ಕೃಷ್ಣಕುಮಾರ್ ಗೆ ಚಾಕುವಿನಿಂದ ಇರಿದಿದ್ದು, ಆಕೆಯನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ವಶದಲ್ಲಿರುವ ಜಯಶೀಲನ್ ತನ್ನ ಮೇಲಿನ ಆರೋಪವನ್ನು ಒಪ್ಪಿಕೊಂಡಿದ್ದು, ಯಾವ ಕಾರಣಕ್ಕೆ ಈ ಕೃತ್ಯವೆಸಗಿದ್ದಾನೆಂಬುದರ ಕುರಿತು ಬಾಯಿ ಬಿಟ್ಟಿಲ್ಲ.

ಜಯಶೀಲನ್ ಮೇಲಿನ ಆರೋಪ ದೃಢಪಟ್ಟರೆ ಆತ ಜೀವಾವಧಿ ಶಿಕ್ಷೆಗೊಳಪಡಲಿದ್ದು, ದಂಪತಿಗಳಿಗೆ ಒಂದು ಮಗುವಿದೆ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಮಯೂರಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ಹೇಳಿವೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...