alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಅಕ್ಕ ಪ್ರೀತಿ ನಿರಾಕರಿಸಿದ್ದಕ್ಕೆ ತಂಗಿ ಮೇಲೆ ಅತ್ಯಾಚಾರ

ಅಕ್ಕ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯ 11 ವರ್ಷದ ತಂಗಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಅಮಾನುಷ ಘಟನೆ ಉತ್ತರಾಖಂಡದ ಉತ್ತರಕಾಶಿಯಲ್ಲಿ ನಡೆದಿದೆ.

ಈ ಸಂಬಂಧ ಮುಖೇಶ್‌ ಲಾಲ್‌ ಅಲಿಯಾಸ್‌ ಬಂಟಿ(22)ಯನ್ನು ಪೊಲೀಸರು ಬಂಧಿಸಿದ್ದಾರೆ. ಮುಖೇಶ್‌ 17 ವರ್ಷದ ಬಾಲಕಿಗೆ ತನ್ನನ್ನು ಪ್ರೀತಿಸುವಂತೆ ಪೀಡಿಸಿದ್ದಾನೆ. ಆದರೆ ಬಾಲಕಿ ಇದಕ್ಕೆ ಒಪ್ಪಿಲ್ಲ. ಇದರಿಂದ ಕೋಪಗೊಂಡಿದ್ದ ಬಂಟಿ, ಬಾಲಕಿಯ ತಂಗಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾನೆ ಎಂದು ಡಿಸಿಪಿ ಅಜಯ್‌ ರುಟೇಲ ತಿಳಿಸಿದ್ದಾರೆ.

ವಿಚಾರಣೆ ವೇಳೆ ಬಂಟಿ ತಪ್ಪೊಪ್ಪಿಕೊಂಡಿದ್ದು, ಬೇರೆಯವರ ಕೈವಾಡ ಈ ಕೃತ್ಯದಲ್ಲಿಲ್ಲ. ಅಲ್ಲದೆ ಬಂಟಿ ಒಬ್ಬನೇ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಸುತ್ತಮುತ್ತಲ ಪಟ್ಟಣಗಳಲ್ಲೂ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿರುವ ವಾತಾವರಣ ಕಂಡು ಬಂದಿತ್ತು.

ಬಂಟಿ ಈ ಮೊದಲು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದೇ ಇದ್ದಲ್ಲಿ, ಅಪಹರಣ ಮಾಡುವುದಾಗಿ ಧಮಕಿ ಹಾಕಿದ್ದ. ಹೀಗಾಗಿ ಬಾಲಕಿ ತನ್ನ ಅಜ್ಜಿಯ ಮನೆಯಲ್ಲಿದ್ದಳು ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...