alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಅಪ್ರಾಪ್ತೆಯೊಂದಿಗಿನ ಜೈಲರ್ ವಿಡಿಯೋ

kripa shankar

ಕಾರಾಗೃಹದಲ್ಲಿನ ಕೈದಿಗಳ ಮನ ಪರಿವರ್ತನೆ ಮಾಡಬೇಕಿದ್ದ ಜೈಲರ್ ಒಬ್ಬ ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ.

ಬಿಹಾರದ ಕಿಶನ್ ಗಂಜ್ ಕಾರಾಗೃಹದ ಸೂಪರಿಟೆಂಡೆಂಟ್ ಕೃಪಾಶಂಕರ್ ಪಾಂಡೆ ಅಪ್ರಾಪ್ತ ಬಾಲಕಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಹವಣಿಸಿದ್ದಾನೆ. ಈ ದೃಶ್ಯವನ್ನು ಸೆರೆ ಹಿಡಿದವರೊಬ್ಬರು ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಬಿಹಾರ ಸರ್ಕಾರ ತನಿಖೆಗೆ ಆದೇಶಿಸಿದೆ. ಕೃಪಾಶಂಕರ್ ಪಾಂಡೆ, ಕಾರಾಗೃಹದಲ್ಲಿ ಈ ಕೃತ್ಯವೆಸಗಿದ್ದಾನೆಯೋ ಅಥವಾ ಕಾರಾಗೃಹದ ಹೊರಗೆ ಈ ದೃಶ್ಯ ಸೆರೆ ಹಿಡಿಯಲಾಗಿದೆಯೋ ಎಂಬುದು ತನಿಖೆಯಿಂದ ಬೆಳಕಿಗೆ ಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...