alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಡಿನಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ

cr 25

ಕಾಡಿನಲ್ಲಿ ಒಣ ಸೌದೆ ತೆಗೆದುಕೊಂಡು ಹೋಗಲು ಬಂದಿದ್ದ ಗಿರಿಜನ ಮಹಿಳೆಯರೊಂದಿಗೆ, ಎನ್.ಜಿ.ಒ. ಸಂಸ್ಥೆಯೊಂದರ ಪ್ರತಿನಿಧಿಗಳು, ಅಸಭ್ಯವಾಗಿ ವರ್ತಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ನಾಲ್ವರ ವಿರುದ್ಧ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈಲ್ಡ್ ಲೈಫ್ ಕನ್ಸರ್ವೇಷನ್ ಸೊಸೈಟಿಯ ಪ್ರತಿನಿಧಿಗಳೆನ್ನಲಾದ ನಾಲ್ವರು, ಕಾಡಿನಲ್ಲಿದ್ದ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ. ಕೃಷ್ಣ, ಪಾಪಣ್ಣ, ಬಿದ್ದಪ್ಪ ಹಾಗೂ ಮಧ್ಯಪ್ರದೇಶದ ಶಾಹಿಲ್ ಅವರು ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಹುಲಿಗಣತಿ ಮಾಡಲು ಇವರೆಲ್ಲಾ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಗಿರಿಜನ ಮಹಿಳೆಯರು, ಕಾಡಿನಲ್ಲಿ ಬಿದ್ದ ಒಣಗಿದ ಸೌದೆ ಆರಿಸುವುದನ್ನು ಕಂಡಿದ್ದಾರೆ.

ಅವರ ಬಳಿಗೆ ಹೋಗಿ ಅನುಚಿತವಾಗಿ ವರ್ತಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಮಹಿಳೆಯರೆಲ್ಲಾ ಒಟ್ಟುಗೂಡಿ ನಾಲ್ವರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ಅವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು, ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...