alex Certify
ಕನ್ನಡ ದುನಿಯಾ       Mobile App
       

Kannada Duniya

ಗೆಳತಿ ಜೊತೆ ದೈಹಿಕ ಸಂಪರ್ಕ; ನಂತರ ಆಗಿದ್ದೇನು?

love 123

ಮಂಗಳೂರು: ಮುಗ್ಧ ಹೆಣ್ಣುಮಕ್ಕಳನ್ನು ಮದುವೆಯಾಗುವುದಾಗಿ ನಂಬಿಸಿ ಅವರನ್ನು ಬಳಸಿಕೊಂಡು ಮೋಸ ಮಾಡುವ ಅನೇಕ ಪ್ರಕರಣ ವರದಿಯಾಗಿವೆ. ಈ ಸಾಲಿಗೆ ಮತ್ತೊಂದು ಸೇರ್ಪಡೆ ಎನ್ನಬಹುದಾದ ಘಟನೆಯೊಂದು ಸುರತ್ಕಲ್ ನಲ್ಲಿ ನಡೆದಿದೆ.

ಮಣಿಪುರ ಮೂಲದ ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನಂತರ ಮದುವೆಯಾಗಲು ನಿರಾಕರಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ಶಿರೂರು ನಿವಾಸಿ 24 ವರ್ಷದ ಯುವಕ ಮಂಗಳೂರಿನ ಕಾಲೇಜೊಂದರಲ್ಲಿ ಬಿಎಸ್ಸಿ ಇಂಟೀರಿಯಲ್ ಡಿಸೈನ್ ಕೋರ್ಸ್ ಕಲಿಯುತ್ತಿದ್ದು, ವಿ ಚಾಟ್ ಮೂಲಕ ಮೂಡಬಿದರೆಯಲ್ಲಿ ವಾಸವಾಗಿದ್ದ ಮಣಿಪುರ ಮೂಲದ ಯುವತಿಯ ಪರಿಚಯ ಮಾಡಿಕೊಂಡಿದ್ದ. ಪರಿಚಯ ಸ್ನೇಹ, ಪ್ರೀತಿಗೆ ತಿರುಗಿತ್ತು.

ಇಬ್ಬರೂ ಬೀಚ್, ಮಾಲ್ ಗಳಲ್ಲಿ ಸುತ್ತಾಡಿದ್ದರು. ಆತನ ರೂಂನಲ್ಲಿ ಹಾಗೂ ಸ್ನೇಹಿತನ ಮನೆಯಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕ ಬಳಿಕ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ಮನನೊಂದು ಯುವತಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...