alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೇಯಸಿ ಮನೆಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

fire-1

ಪಾಗಲ್ ಪ್ರೇಮಿಯೊಬ್ಬ ಶುಕ್ರವಾರ ತಡ ರಾತ್ರಿ ತನ್ನ ಪ್ರೇಯಸಿ ಮನೆಗೆ ಬೆಂಕಿ ಹಚ್ಚಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಶ್ರೀರಾಂಪುರದ ಸಾಯಿಬಾಬಾ ನಗರದಲ್ಲಿ ನಡೆದಿದೆ.

ದೀಪಕ್ ಎಂಬಾತನೇ ಈ ಕೃತ್ಯವೆಸಗಿದ್ದು, ಘಟನಾ ಸ್ಥಳದಲ್ಲೇ ಆರೋಪಿಯನ್ನು ಶ್ರೀರಾಂಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೀಪಕ್, ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿರುವ ಪರಿಣಾಮ ಮೇಘನಾ, ಸಂಜನಾ, ನಟರಾಜ್ ಹಾಗೂ ಅನುಪಮಾ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ದೀಪಕ್, ತನ್ನದೇ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದನೆಂದು ತಿಳಿದುಬಂದಿದೆ. ಇಬ್ಬರೂ ಈ ಹಿಂದೆ ಮದುವೆ ಮಾಡಿಕೊಳ್ಳಲು ನಿರ್ಧರಿಸಿ ಮೈಸೂರಿಗೆ ತೆರಳಿದ್ದರೆಂದು ಹೇಳಲಾಗಿದ್ದು, ವಿಷಯ ಅರಿತ ಪೋಷಕರು ವಿದ್ಯಾಭ್ಯಾಸ ಮುಗಿದ ಬಳಿಕ ಮದುವೆ ಮಾಡಿಕೊಡುವುದಾಗಿ ತಿಳಿಸಿದ್ದರೆನ್ನಲಾಗಿದೆ.

ಆದರೆ ಈ ನೆಪದಲ್ಲಿ ಯುವತಿಯನ್ನು ಬೇರೆಯವರೊಂದಿಗೆ ಮದುವೆ ಮಾಡಬಹುದೆಂಬ ಆತಂಕ ಹೊಂದಿದ್ದ ದೀಪಕ್, ಶುಕ್ರವಾರ ತಡರಾತ್ರಿ ಪೆಟ್ರೋಲ್ ಸುರಿದು ಪ್ರೇಯಸಿ ಮನೆಗೆ ಬೆಂಕಿ ಹಚ್ಚಿದ್ದಾನೆ. ಗಾಯಾಳುಗಳನ್ನು ಈಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದೀಪಕ್ ನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...