alex Certify
ಕನ್ನಡ ದುನಿಯಾ       Mobile App
       

Kannada Duniya

ಮದರಸಾದಲ್ಲಿ ಲೈಂಗಿಕ ದೌರ್ಜನ್ಯ: 51 ಹುಡುಗಿಯರು ಬಂಧಮುಕ್ತ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಮದರಸಾ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲಿದ್ದ ಡಜನ್ ಗಟ್ಟಲೆ ಹುಡುಗಿಯರನ್ನು ಪೊಲೀಸರು ಬಂಧಮುಕ್ತಗೊಳಿಸಿದ್ದಾರೆ. ಮದರಸಾ ಮ್ಯಾನೇಜರ್ ಮೇಲೆ ಲೈಂಗಿಕ ದೌರ್ಜನ್ಯದ ದೂರು ದಾಖಲಾಗಿದೆ.

ಮೊ ತೈಯಬ್ ಮದರಸಾ ನಡೆಸುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಮದರಸಾದಲ್ಲಿ 125 ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಘಟನೆ ವೇಳೆ 51 ವಿದ್ಯಾರ್ಥಿನಿಯರಿದ್ದರು ಎನ್ನಲಾಗಿದೆ.

ಪೊಲೀಸರ ಜೊತೆ ಮಹಿಳಾ ಆಯೋಗದ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು. ಮಕ್ಕಳ ಕಲ್ಯಾಣ ಸಮಿತಿಗೂ ಮಾಹಿತಿ ನೀಡಲಾಗಿದೆ. ಮೊ ತೈಯಬ್ ಮುಗ್ದ ಹುಡುಗಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ ಎನ್ನಲಾಗಿದೆ. 12ಕ್ಕೂ ಹೆಚ್ಚು ವಿದ್ಯಾನಿಯರು ಆತನ ಕಾಮತೃಷೆಗೆ ಬಲಿಯಾಗಿದ್ದಾರೆ. ಮೊ ತೈಯಬ್ ನಿಂದ ಚಿತ್ರಹಿಂಸೆ ಅನುಭವಿಸುತ್ತಿದ್ದ ವಿದ್ಯಾರ್ಥಿನಿಯರಿಗೆ ಈಗ ಬಿಡುಗಡೆ ಭಾಗ್ಯ ಸಿಕ್ಕಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...