alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಲ್ ಫ್ರೆಂಡ್ ಮನೆಯಲ್ಲಿ ತನಗೆ ತಾನೇ ಗುಂಡಿಕ್ಕಿಕೊಂಡ ಪಾಗಲ್ ಪ್ರೇಮಿ

ನವದೆಹಲಿ: ಪ್ರೇಮಿಯೊಬ್ಬ ತನ್ನ ಪ್ರಿಯತಮೆಯ ಮನೆಯಲ್ಲಿಯೇ ಪಿಸ್ತೂಲಿನಿಂದ ತನಗೆ ತಾನೇ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೆಹಲಿಯಿಂದ ವರದಿಯಾಗಿದೆ.

ದೆಹಲಿ ಕಪಾಶೆರಾದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದ್ದು, 26ರ ಹರೆಯದ ದೀಪಕ್ ಗುಜ್ಜರ್ ಎಂಬಾತನೇ ಆತ್ಮಹತ್ಯೆಗೆ ಶರಣಾದ ಪ್ರೇಮಿ. ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದ ಆತನನ್ನು ತಕ್ಷಣ ಏಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಅದಾಗಲೇ ಆತ ಮೃತಪಟ್ಟಿದ್ದ.

ಪ್ರೇಮ ವಿಚಾರವೇ ಈ ಆತ್ಮಹತ್ಯೆ ಕಾರಣ ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆತ ಯಾವುದೇ ಡೆತ್ ನೋಟ್ ಕೂಡ ಬರೆಯದ್ದರಿಂದ ಆತನ ಫೋನ್ ಕಾಲ್ ರೆಕಾರ್ಡ್ ಗಳನ್ನು ಪರಿಶೀಲಿಸಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...