alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಾಹಿತೆಯನ್ನು ಕೊಂದು ತಾನೂ ಸಾವಿಗೆ ಶರಣಾದ ಪ್ರಿಯಕರ

cr 25ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಹತ್ಯೆ ಮಾಡಿ ಬಳಿಕ ತಾನೂ ವಿಷ ಕುಡಿದು ಸಾವಿಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಧೋಲಪುರ್ ಜಿಲ್ಲೆಯ ಭವನಾಪುರ ಗ್ರಾಮದ 29 ವರ್ಷದ ರಾಮನಾಥ್ ಮೀನಾ ಎಂಬಾತ ವಿವಾಹಿತನಾಗಿದ್ದರೂ ಅದೇ ಗ್ರಾಮದ ಮತ್ತೊಬ್ಬ ವಿವಾಹಿತೆ 35 ವರ್ಷದ ಸಮಂತಿ ದೇವಿ ಎಂಬಾಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ.

ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಆಕೆಯ ಮನೆಗೆ ಹೋದ ರಾಮನಾಥ್, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತನ್ನ ಮನೆಗೆ ಬಂದು ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾನೆ. ಸಾವನ್ನಪ್ಪಿದ ಇಬ್ಬರೂ ಸಂಬಂಧಿಕರಾಗಿದ್ದರೆಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಿಳಿಸಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...