alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರವೆಸಗಲು ವಿಫಲನಾದವ ಇಂಥ ಕೆಲಸ ಮಾಡ್ದ

ಡೆಹ್ರಾಡೂನ್ ನಲ್ಲಿ ಮನಕಲಕುವ ಘಟನೆ ನಡೆದಿದೆ. 7 ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಅತ್ಯಾಚಾರವೆಸಗಲು ವಿಫಲನಾದ ಪಾಪಿ ಚಿತ್ರಹಿಂಸೆ ನೀಡಿ ಬಾಲಕಿಯ ಹತ್ಯೆ ಮಾಡಿದ್ದಾನೆ.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 55 ಸಾವಿರ ರೂಪಾಯಿ ದಂಡ ವಿಧಿಸಿದೆ. ಸಾಕ್ಷಿ ನಾಶಕ್ಕೆ ಯತ್ನಿಸಿದ ಇನ್ನೊಬ್ಬ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಏಪ್ರಿಲ್ 15, 2017ರಂದು ಈ ಘಟನೆ ನಡೆದಿತ್ತು.

ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ನೋಡಿ ಮನೆಗೆ ನುಗ್ಗಿದ ರಾಜಸ್ತಾನದ ವ್ಯಕ್ತಿ ಅತ್ಯಾಚಾರವೆಸಗಲು ಯತ್ನಿಸಿದ್ದ. ಆದ್ರೆ ಅತ್ಯಾಚಾರವೆಸಗಲು ಸಾಧ್ಯವಾಗಿರಲಿಲ್ಲ. ಆ ನಂತ್ರ ಕತ್ತು ಕತ್ತರಿಸಿ ಕೊಲೆ ಮಾಡಿದ್ದ. ಸ್ನೇಹಿತನೊಬ್ಬನ ಮನೆಯಲ್ಲಿ ಈಗ ಆಶ್ರಯಪಡೆದಿದ್ದ ಎನ್ನಲಾಗಿದೆ.

ಬಾಲಕಿ ತಂದೆ ದೂರಿನ ಮೇಲೆ ತನಿಖೆ ಶುರು ಮಾಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. 15 ಸಾಕ್ಷ್ಯಗಳನ್ನು ನೀಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...