alex Certify
ಕನ್ನಡ ದುನಿಯಾ       Mobile App
       

Kannada Duniya

ಸೂಸೂ ಮಾಡಿದ್ದಕ್ಕೆ ಆರಂಭವಾದ ವಾಗ್ವಾದ ಹತ್ಯೆಯಲ್ಲಿ ಅಂತ್ಯ

ನವದೆಹಲಿ: ಸಾರ್ವಜನಿಕ ಪ್ರದೇಶದಲ್ಲಿ ಸೂಸು ಮಾಡಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳ ನಡುವೆ ಆರಂಭವಾದ ಜಗಳದಲ್ಲಿ, ಜಗಳ ಬಿಡಿಸಲೆಂದು ಬಂದ ವ್ಯಕ್ತಿಯನ್ನೇ ಹತ್ಯೆಗೈದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಇಲ್ಲಿನ ಶಾಸ್ತ್ರಿ ಪಾರ್ಕ್ ಏರಿಯಾದಲ್ಲಿ ಈ ಭೀಕರ ಘಟನೆ ನಡೆದಿದ್ದು, ಲೊನಿಯ ನಿವಾಸಿ ವಸೀಂ ಎಂಬಾತ ಮೃತ ವ್ಯಕ್ತಿ. ವಸೀಂ ತನ್ನ ಚಿಕ್ಕಪ್ಪ ಹಾಗೂ ಸಹೋದರನೊಂದಿಗೆ ಆಟೋದಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬ ಸಹಾಯಕ್ಕಾಗಿ ಅಂಗಲಾಚಿದ್ದ.

ಇದನ್ನು ನೋಡಿದ ವಾಸಿಂ ಆಟೋ ಇಳಿದು ಸಹಾಯಕ್ಕೆ ಹೋಗಿದ್ದಾರೆ. ಈ ವೇಳೆ ಇಬ್ಬರ ನಡುವೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಮುಂದಾಗಿದ್ದಾರೆ. ಜಗಳಕ್ಕೆ ಕಾರಣವೇನೆಂದು ವಾಸಿಂ ಕೇಳಿದ್ದಾರೆ. ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದನ್ನು ಇನ್ನೊಬ್ಬ ವ್ಯಕ್ತಿ ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ವಾಗ್ವಾದ ಆರಂಭವಾಗಿದೆ. ಈ ವೇಳೆ ವ್ಯಕ್ತಿಯೊಬ್ಬ ವಾಸಿಂಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ವಾಸಿಂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...