alex Certify
ಕನ್ನಡ ದುನಿಯಾ       Mobile App
       

Kannada Duniya

ಅಶ್ಲೀಲ ಫೋಟೋಗಳನ್ನು ಪೋಸ್ಟ್ ಮಾಡಿದ ಅಪ್ಪ-ಮಗ

ಪಗ್ವಾರಿ: ಓರ್ವ ಯುವತಿ ಸೇರಿ ಮೂವರು ವಿದ್ಯಾರ್ಥಿಗಳ ಆಕ್ಷೇಪಾರ್ಹ ಚಿತ್ರಗಳನ್ನು ಸಾಮಾಜಿಕ ತಾಣಗಳಲ್ಲಿ ಹಾಕಿದ ತಂದೆ-ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಲುಧಿಯಾನದಲ್ಲಿನ ಹೈಬೊವಲ್‌ನಲ್ಲಿನ ಯತಿನ್‌ ಬೇಡಿ ಹಾಗೂ ಆತನ ತಂದೆ ಜಸ್ವಿಂದರ್‌ ಬೇಡಿ ಬಂಧಿತರು. ಖಾಸಗಿ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ವಿದ್ಯಾರ್ಥಿನಿ ಈ ಬಗ್ಗೆ ದೂರು ನೀಡಿದ್ದರು.

ಫೇಸ್‌ಬುಕ್‌ ಹಾಗೂ ಟ್ವಿಟರ್‌ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಕೆಲ ಆಕ್ಷೇಪಾರ್ಹ (ಅಶ್ಲೀಲ) ಫೋಟೋಗಳನ್ನು ಪೋಸ್ಟ್‌ ಮಾಡಿದ್ದಾರೆ. ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...