alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿಯನ್ನು ಚುಡಾಯಿಸಿದವನು ನಂತರ ಮಾಡಿದ್ದೇನು.?

knifeನೆರೆ ಮನೆಯ ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ ಯುವಕನೊಬ್ಬ ಅದನ್ನು ಪ್ರಶ್ನಿಸಿದ ಆಕೆಯ ತಂದೆಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮೀರತ್ ನ ಲಿಸಾರಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನ್ನ ಮನೆ ಮುಂದೆ ನಿಂತಿದ್ದ 14 ವರ್ಷದ ಬಾಲಕಿಯನ್ನು ಪಕ್ಕದ ಮನೆಯ ಜಾವೇದ್ ಖುರೇಷಿ ಎಂಬ ಯುವಕ ಚುಡಾಯಿಸಿದ್ದಾನೆ. ಈ ವಿಚಾರವನ್ನು ಬಾಲಕಿ ಮನೆಯಲ್ಲೇ ಇದ್ದ ತನ್ನ ತಂದೆಗೆ ತಿಳಿಸಿದ್ದಾಳೆ.

ಹೊರ ಬಂದ ಬಾಲಕಿಯ ತಂದೆ ಈ ಕುರಿತು ಜಾವೇದ್ ಖುರೇಷಿಯನ್ನು ವಿಚಾರಿಸುತ್ತಿದ್ದು, ಈ ಸಂದರ್ಭದಲ್ಲಿ ಆತ ಚಾಕುವಿನಿಂದ ಬಾಲಕಿಯ ತಂದೆಯನ್ನು ಇರಿದು ಪರಾರಿಯಾಗಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...