alex Certify
ಕನ್ನಡ ದುನಿಯಾ       Mobile App
       

Kannada Duniya

ಪರ್ಸ್ ನಲ್ಲಿದ್ದ ಹಣ ತೆಗೆದುಕೊಂಡಳೆಂಬ ಕಾರಣಕ್ಕೆ ಮನಬಂದಂತೆ ಥಳಿಸಿದ ಪತಿ

ಪತಿರಾಯನೊಬ್ಬ ತನ್ನ ಪತ್ನಿ ಪರ್ಸ್ ನಲ್ಲಿದ್ದ ಹಣ ತೆಗೆದುಕೊಂಡಳೆಂಬ ಕ್ಷುಲ್ಲಕ ಕಾರಣಕ್ಕೆ ಮನಬಂದಂತೆ ಥಳಿಸಿರುವ ಘಟನೆ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದಿದೆ.

ಈ ಮಹಿಳೆಯ ವಿವಾಹ 14ವರ್ಷಗಳ ಹಿಂದೆ ನೆರವೇರಿದ್ದು, ಇವರಿಗೆ ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ. ಮದುವೆಯಾದ ಕೆಲ ವರ್ಷಗಳ ಬಳಿಕ ಪತ್ನಿಯ ನಡತೆ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದ ಪತಿ ನಿರಂತರ ಹಲ್ಲೆ ನಡೆಸುತ್ತಿದ್ದನೆನ್ನಲಾಗಿದೆ.

ಆದರೂ ಮಕ್ಕಳ ಕಾರಣಕ್ಕಾಗಿ ಪತ್ನಿ ಈತನ ಹಿಂಸೆಯನ್ನು ಸಹಿಸಿಕೊಂಡಿದ್ದು, ಜೂನ್ 12 ರಂದು ಮನೆ ಖರ್ಚಿಗೆ ಅವಶ್ಯಕತೆ ಇದ್ದ ಕಾರಣ ಪತಿಯ ಪರ್ಸ್ ನಿಂದ ಸ್ವಲ್ಪ ಹಣ ತೆಗೆದುಕೊಂಡಿದ್ದಾಳೆ.

ಈ ವಿಚಾರ ತಿಳಿಯುತ್ತಿದ್ದಂತೆಯೇ ಪತಿ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸ್ನೇಹಿತರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿ ಚಿಕಿತ್ಸೆ ಪಡೆದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...