alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಡ್ಯದ ಹೈಪ್ರೊಪೈಲ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

prostitution13

ಮಹಾನಗರಗಳಲ್ಲಿ ಹೆಚ್ಚಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಇತ್ತೀಚೆಗೆ ಎರಡನೇ ಹಂತದ ನಗರಗಳಲ್ಲೂ ಹೆಚ್ಚಾಗುತ್ತಿದೆ. ಮಹಾ ನಗರಗಳಿಗಿಂತ ಮಧ್ಯಮ ನಗರಗಳಲ್ಲಿ ವೇಶ್ಯಾವಾಟಿಕೆ ಜಾಲ ಬೇರು ಬಿಟ್ಟಿದೆ ಎಂಬುದಕ್ಕೆ
ಮಂಡ್ಯದಲ್ಲಿನ ಈ ಪ್ರಕರಣ ಉದಾಹರಣೆಯಂತಿದೆ.

ಮಂಡ್ಯದ ಜನವಸತಿ ಪ್ರದೇಶದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು, ನಾಲ್ವರು ಯುವತಿಯರು ಸೇರಿದಂತೆ ಐದು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಹೊರಗಿನಿಂದ ಮಂಡ್ಯಕ್ಕೆ
ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮಂಡ್ಯ ಪೂರ್ವ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಂಡ್ಯದ ಅಶೋಕನಗರ ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ, ಹೈಪ್ರೊಪೈಲ್ ವೇಶ್ಯಾವಾಟಿಕೆ ಜಾಲ ಪತ್ತೆ ಮಾಡಿದ್ದು, ಐವರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...