alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ

mosa

ಹೆಣ್ಣುಮಕ್ಕಳನ್ನು ನಂಬಿಸಿ ಮೋಸ ಮಾಡುವ ಹಲವಾರು ಪ್ರಕರಣ ನಡೆದಿವೆ. ಹೀಗೆ ಮದುವೆಯಾಗುವುದಾಗಿ ಯುವತಿಯೊಬ್ಬಳನ್ನು ನಂಬಿಸಿ ದೈಹಿಕ ಸಂರ್ಕ ಬೆಳೆಸಿದ ದುರುಳನೊಬ್ಬ ಆಕೆಯನ್ನು ವಂಚಿಸಿ ಪರಾರಿಯಾದ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಜಯಪುರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಸಮೀಪದ ಗ್ರಾಮವೊಂದರ ಯುವತಿಯನ್ನು ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದ 34 ವರ್ಷದ ರವಿ ಶೆಟ್ಟಿ ಎಂಬಾತ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರೀತಿಸಿ ಮದುವೆಯಾಗುವುದಾಗಿ ಆತ ನಂಬಿಸಿದ್ದ ಕಾರಣ ಯುವತಿಯೂ ಸಮ್ಮತಿಸಿದ್ದಳು. ಇದೀಗ ಯುವತಿ 7 ತಿಂಗಳ ಗರ್ಭಿಣಿಯಾಗಿದ್ದು, ಕೆಲವು ದಿನಗಳಿಂದ ಆರೋಪಿ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ.

ಯುವತಿಗೆ ಮೋಸ ಹೋಗಿರುವುದು ಗೊತ್ತಾಗುತ್ತಿದ್ದಂತೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನಕ್ರಮ ಕೈಗೊಂಡಿದ್ದಾರೆ. ರವಿಶೆಟ್ಟಿ ಈ ಘಟನೆಯ ಬಳಿಕ ವಿದೇಶಕ್ಕೆ ಹೋಗಿರಬಹುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...