alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಾಹಿತೆ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್

gang rape 35789ಕಛೇರಿ ಕೆಲಸ ಮುಗಿಸಿಕೊಂಡು ತನ್ನ ಸಹೋದರನೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಐವರು ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಪ್ರತಾಪ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.

ನೋಯ್ಡಾ ಸೆಕ್ಟರ್ 63 ರಲ್ಲಿರುವ ಕಛೇರಿಯಲ್ಲಿ 35 ವರ್ಷದ ಮಹಿಳೆ ಕೆಲಸ ಮಾಡುತ್ತಿದ್ದು, ಶುಕ್ರವಾರ ರಾತ್ರಿ 8-30 ರ ಸುಮಾರಿಗೆ ತಮ್ಮ ಸಹೋದರನ ಬೈಕ್ ನಲ್ಲಿ ಗಾಜಿಯಾಬಾದ್ ನ ಕೈಲಾಶ್ ನಗರದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ.

ಶುಕ್ರವಾರವಾಗಿದ್ದ ಕಾರಣ ಎನ್ಎಚ್ 4 ರಲ್ಲಿ ಟ್ರಾಫಿಕ್ ಜಾಸ್ತಿಯಿದ್ದು, ಹೀಗಾಗಿ ಸಮೀಪದ ದಾರಿಯಲ್ಲಿ ಹೋಗುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ ಐವರು ದುಷ್ಕರ್ಮಿಗಳ ತಂಡ ಅವರನ್ನು ಅಡ್ಡಗಟ್ಟಿದೆ. ಮಹಿಳೆಯ ಸಹೋದರನ ಮೇಲೆ ಹಲ್ಲೆ ನಡೆಸಿದ ಗುಂಪು ಬಳಿಕ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿದೆಯಲ್ಲದೇ ಅವರ ಬಳಿ ಇದ್ದ ಹಣ ಹಾಗೂ ಆಭರಣಗಳನ್ನು ಕಸಿದುಕೊಂಡಿದೆ. ವಿಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೈದ್ಯಕೀಯ ಪರೀಕ್ಷೆ ವೇಳೆ ಮಹಿಳೆ ಮೇಲೆ ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...