alex Certify
ಕನ್ನಡ ದುನಿಯಾ       Mobile App
       

Kannada Duniya

ಮಸಾಜ್ ಪಾರ್ಲರ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ

masaj parl

ಬೆಂಗಳೂರು: ಮಹಾನಗರಗಳಲ್ಲಿ ವೇಶ್ಯಾವಾಟಿಕೆ ವ್ಯಾಪಕವಾಗಿದ್ದು, ಇದರ ತಡೆಗೆ ಏನೆಲ್ಲಾ ಕ್ರಮಕೈಗೊಂಡರೂ, ಸಂಪೂರ್ಣ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ಬೆಂಗಳೂರಿನಲ್ಲಿ ಮತ್ತೆ ವೇಶ್ಯಾವಾಟಿಕೆ ಹೆಚ್ಚಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು.

ಬೇರೆ, ಬೇರೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದ್ದು, ಇದಕ್ಕೆ ಪೂರಕ ಎನ್ನುವಂತೆ ಮಸಾಜ್ ಪಾರ್ಲರ್ ಹೆಸರಿನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಜಮ್ಮು ಕಾಶ್ಮೀರ ಮೂಲದ ಯುವತಿಯರನ್ನು ರಕ್ಷಿಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ನೇಪಾಳದ ದೀಪಕ್, ಬೆಂಗಳೂರಿನ ಜಹೂರ ಇರ್ಫಾನ್ ಬಂಧಿತ ಆರೋಪಿಗಳಾಗಿದ್ದಾರೆ.

ಜಾಕೀರ್ ಹುಸೇನ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನ ಹೆಚ್.ಆರ್.ಬಿ.ಆರ್. ಲೇ ಔಟ್ ನಲ್ಲಿದ್ದ ಅಪಾರ್ಟ್ ಮೆಂಟ್ ಒಂದರಲ್ಲಿ ಜಮ್ಮು ಕಾಶ್ಮೀರದಿಂದ ಯುವತಿಯರನ್ನು ಮನೆಕೆಲಸಕ್ಕೆಂದು ಕರೆತಂದು ವೇಶ್ಯಾವಾಟಿಕೆಗೆ ನೂಕಿದ್ದರು. ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...