alex Certify
ಕನ್ನಡ ದುನಿಯಾ       Mobile App
       

Kannada Duniya

ಮೀರತ್ ನಲ್ಲಿ ನಡೆದಿದೆ ಮನುಕುಲವೇ ತಲೆ ತಗ್ಗಿಸುವ ಘಟನೆ

ಸಹೋದರರ ಕಾಮತೃಷೆಗೆ ಕಳೆದು ಐದು ವರ್ಷಗಳಿಂದ ತಂಗಿಯನ್ನು ಬಳಸಿಕೊಳ್ಳುತ್ತಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರು ತಲೆ ಮರೆಸಿಕೊಂಡಿದ್ದಾರೆ.

ಈ ಅಮಾನವೀಯ ಘಟನೆ ಮೀರತ್ ನಲ್ಲಿ ನಡೆದಿದ್ದು, 15 ವರ್ಷದ ಅಪ್ರಾಪ್ತೆ ಮೇಲೆ ಇಬ್ಬರು ಸಹೋದರರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಕಳೆದ ಐದು ವರ್ಷದಿಂದ ಈ ಅಮಾನವೀಯ ಘಟನೆ ನಡೆಯುತ್ತಿದ್ದರೂ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಬಾಲಕಿ ಹೆದರಿದ್ದಾಳೆ. ಬುಧವಾರ ದೂರು ದಾಖಲಾಗುತ್ತಿದ್ದಂತೆ, ಇಬ್ಬರು ಸಹೋದರರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸತತ ಅತ್ಯಾಚಾರವೆಸಗಿರುವ ಸಹೋದರರು, ಬಾಲಕಿ ಇದಕ್ಕೆ ವಿರೋಧಿಸಿದಾಗ ಹಲ್ಲೆ ನಡೆಸುವುದರೊಂದಿಗೆ ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದರು ಎಂದು ದೂರಿನಲ್ಲಿ ಹೇಳಿಕೆ ನೀಡಿದ್ದಾಳೆ.

ದೂರಿನ ಬಗ್ಗೆ ಪ್ರತಿಕ್ರಿಯಿಸಿರುವ ಮೀರತ್ ನಗರ ಎಸ್ಪಿ ರಣ್ ವಿಜಯ್ ಸಿಂಗ್, ಘಟನೆ ಸಿವಿಲ್ ಲೈನ್ಸ್ ಪೊಲೀಸ್ ಸ್ಟೇಷನ್ ಏರಿಯಾದಲ್ಲಿ ಘಟನೆ ನಡೆದಿದೆ. ಸಂತ್ರಸ್ತೆ ಮೇಲೆ ಸಹೋದರರು ಸತತ ಅತ್ಯಾಚಾರ ಎಸಗಿದ್ದಾರೆ. ಸದ್ಯ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...