alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತೆಯನ್ನು ಆಸ್ಪತ್ರೆಗೆ ಕರೆದೊಯ್ದಾಗಲೇ ಬಯಲಾಯ್ತು ಅಸಲಿ ಸತ್ಯ

ಹೊಟ್ಟೆನೋವಿನಿಂದ ಬಳಲುತ್ತಿದ್ದ ಹದಿನಾರು ವರ್ಷದ ಅಪ್ರಾಪ್ತ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದ ವೇಳೆ ಆಕೆ ಈಗಾಗಲೇ 3 ತಿಂಗಳ ಗರ್ಭಿಣಿ ಎಂಬ ಸತ್ಯ ಬಹಿರಂಗವಾಗಿದ್ದು, ಇದಕ್ಕೆ ಕಾರಣವಾಗಿದ್ದ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಪುಣೆಯ ಅದಾಫ್ಸರ್ ನಲ್ಲಿ ಈ ಘಟನೆ ನಡೆದಿದ್ದು, ತನ್ನ ಚಿಕ್ಕಮ್ಮನ ಮನೆಯಲ್ಲಿದ್ದ ಬಾಲಕಿ ಮೇಲೆ ನೆರೆಮನೆಯ ಅಕ್ಷಯ್ ತರು ಎಂಬಾತ ಹಲವಾರು ಬಾರಿ ಅತ್ಯಾಚಾರವೆಸಗಿದ್ದನೆನ್ನಲಾಗಿದೆ.

ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ಭಯದಿಂದ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ. ಕೆಲ ದಿನಗಳ ಹಿಂದೆ ಬಾಲಕಿ ಹೊಟ್ಟೆನೋವು ಎಂದು ಹೇಳಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಬಾಲಕಿ ಮೂರು ತಿಂಗಳ ಗರ್ಭಿಣಿ ಎಂಬ ವಿಚಾರವನ್ನು ವೈದ್ಯರು ತಿಳಿಸಿದ್ದಾರೆ. ಈಗ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿ ಅಕ್ಷಯ್ ವಿರುದ್ಧ ಪೋಸ್ಕೊ ಸೇರಿದಂತೆ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...