alex Certify
ಕನ್ನಡ ದುನಿಯಾ       Mobile App
       

Kannada Duniya

ನಿರಪರಾಧಿಯಲ್ಲ, ಅಪರಾಧಿಗೆ ಹೊಡೆದಿದ್ರು ಜನ

ಗುಜರಾತಿನ ರಾಜ್ಕೋಟ್ ಜಿಲ್ಲೆಯ ಡ್ಯಾಮ್ ಪ್ರದೇಶದಲ್ಲಿ ಮಗುವಿನ ಕಳ್ಳತನ ಆರೋಪದಲ್ಲಿ ಬಂಧಿಸಲ್ಪಟ್ಟಿರುವ  ವ್ಯಕ್ತಿ ಆಘಾತಕಾರಿ ವಿಷ್ಯವನ್ನು ಬಹಿರಂಗಪಡಿಸಿದ್ದಾನೆ. ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಲು ಮುಂದಾಗಿದ್ದೆ ಎಂದಿದ್ದಾನೆ. ಈ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದೆ. ಸ್ಥಳೀಯರು ತನ್ನ ಮೇಲೆ ಹಲ್ಲೆ ನಡೆಸಿದ್ರು ಎಂದು ಆರೋಪಿ ಹೇಳಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ರಾಜ್ಕೋಟ್ ಜಿಲ್ಲೆಯ ಡ್ಯಾಮ್ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದ ಆರೋಪಿ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದ. ಬುಧವಾರ ದೇವಸ್ಥಾನದ ಪೂಜಾರಿ ಮಗುವನ್ನು ರಕ್ಷಿಸುವಂತೆ ಕೂಗಿಕೊಂಡಿದ್ದ. ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿದ್ದರು.

ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದಳು. ದೂರಿನ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇದಕ್ಕೂ ಮೊದಲು ಸಾರ್ವಜನಿಕರ ಹಲ್ಲೆ ವಿಡಿಯೋ ವೈರಲ್ ಆಗಿತ್ತು. ಅಮಾಯಕನಿಗೆ ಥಳಿಸಿದ್ದಾರೆಂಬ ಆರೋಪ ಸಾರ್ವಜನಿಕರ ಮೇಲೆ ಬಂದಿತ್ತು. ಆರಂಭಿಕ ತನಿಖೆಯಲ್ಲಿ ತಾನು ನಿರಪರಾಧಿ ಎಂದಿದ್ದ ಆರೋಪಿ ನಂತ್ರ ತಪ್ಪೊಪ್ಪಿಕೊಂಡಿದ್ದಾನೆ. ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಲು ಸ್ಕೆಚ್ ಹಾಕಿದ್ದೆ ಎಂದಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...