alex Certify
ಕನ್ನಡ ದುನಿಯಾ       Mobile App
       

Kannada Duniya

ತಾಯಿ ಹೆಸರಿಗೆ ಕಳಂಕ ತಂದಿದ್ದಾಳೆ ಈ ಮಹಿಳೆ

ಕಾರವಾರ: ಮಕ್ಕಳ ಬಗ್ಗೆ ತಾಯಿಗಿಂತ ಹೆಚ್ಚಾಗಿ ಯಾರೂ ಕಾಳಜಿ ತೋರಲಾರರು ಎಂಬ ಮಾತಿದೆ. ಇದಕ್ಕೆ ವಿರುದ್ಧವಾಗಿ ಮಹಿಳೆಯೊಬ್ಬಳು ತನ್ನ 12 ದಿನದ ಹೆಣ್ಣು ಮಗುವಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲ್ಲೂಕಿನ ವೆಂಕಟಾಪುರದಲ್ಲಿ ಮಹಿಳೆಯೊಬ್ಬಳು, ತನ್ನ ಹೆಣ್ಣು ಮಗುವನ್ನು ಹತ್ಯೆ ಮಾಡಿದ್ದಾಳೆ. 3 ವರ್ಷಗಳ ಹಿಂದೆ ಮದುವೆಯಾಗಿದ್ದ ಮಹಿಳೆ ತವರು ಮನೆಗೆ ಹೆರಿಗೆಗೆ ಆಗಮಿಸಿದ್ದಾಳೆ.

ಹೆಣ್ಣುಮಗು ಜನಿಸಿದ ಕಾರಣಕ್ಕೆ ಪತಿ ಮಗು ನೋಡಲು ಬಂದಿಲ್ಲ ಎಂದು ಮಾನಸಿಕವಾಗಿ ನೊಂದಿದ್ದ ಮಹಿಳೆ, ಮಾರ್ಚ್ 9 ರಂದು ಮಗುವಿಗೆ ಬೆಂಕಿ ಹಚ್ಚಿದ್ದಾಳೆ. ಮಗುವನ್ನು ತವರು ಮನೆಯವರು ಆಸ್ಪತ್ರೆಗೆ ಸೇರಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಮಹಿಳೆಯ ಸಹೋದರ ನೀಡಿದ ಮಾಹಿತಿ ಆಧರಿಸಿ, ಭಟ್ಕಳ ಗ್ರಾಮಾಂತರ ಠಾಣೆ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ಸಾಂತ್ವನ ಕೇಂದ್ರಕ್ಕೆ ಕಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...