alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೊಳಗಾದ ಮಹಿಳೆ ಆತ್ಮಹತ್ಯೆಗೆ ಶರಣು

ನ್ಯಾಯ ಸಿಗುವ ಯಾವುದೇ ಭರವಸೆಯಿಲ್ಲದ, ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದಾದ ಎರಡು ದಿನಗಳ ಬಳಿಕ ಆಕೆಯ ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದು, ದಂಪತಿಯ 5 ವರ್ಷದ ಮಗಳು ಅನಾಥಳಾದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

30 ವರ್ಷದ ಮಹಿಳೆ, ತನ್ನ ಪತಿ ವಿವೇಕ್ ಹಾಗೂ ಮಗಳೊಂದಿಗೆ ಇಲ್ಲಿನ ಶಿವ ನಗರ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆಕೆಯ ಪತಿ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಶನಿವಾರ ರಾತ್ರಿ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಸಂದೇಹಗೊಂಡು ಪತ್ನಿಯ ಸಹೋದರನೊಂದಿಗೆ ಸೇರಿ ಬಾಗಿಲು ಒಡೆದು ನೋಡಿದಾಗ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡು ಬಂದಿತ್ತು.

ಪತ್ನಿ ಸಾವಿನಿಂದ ನೊಂದ ಪತಿ ಕೂಡ ಎರಡು ದಿನಗಳ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದು, ಹನುಮಾನ್ ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...